ಕಲ್ಪ ಮೀಡಿಯಾ ಹೌಸ್ | ಉಜಿರೆ |
ಬಿ.ಎಲ್. ಸಂತೋಷ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿಂದ ತೆರಳಿದ್ದ ಪೊಲೀಸರು, ಸ್ಥಳೀಯ ಪೊಲೀಸರ ಸಹಕಾರದಲ್ಲಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಬಲಿಗರ ಹೈಡ್ರಾಮಾ
ತಿಮರೋಡಿ ವಿರುದ್ಧ ಎಫ್’ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯುಲು ಪೊಲೀಸರು ಆತನ ಉಜಿರೆಯ ಮನೆಗೆ ಬಂದ ವೇಳೆ ಹೈಡ್ರಾಮಾ ನಡೆಯಿತು.
ತಿಮರೋಡಿಯನ್ನು ವಶಕ್ಕೆ ಪಡೆಯಲು ಪೊಲೀಸರು ಆತನ ಮನೆಗೆ ಬಂದು ವಿಚಾರಿಸಿದಾಗ ಮನೆಯ ಒಳಗಿದ್ದೇ ಇಲ್ಲದಂತೆ ತಿಮರೋಡಿ ಬೆಂಬಲಿಗರು ಬಿಂಬಿಸಿದ್ದಾರೆ ಎಂದು ವರದಿಯಾಗಿದೆ.
ತಿಮರೋಡಿ ಬೆಂಬಲಿಗರು, ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ನೀವು ವಿಚಾರಣೆಗೆ ಕಡೆಯಿರಿ, ನಾವೇ ಬರುತ್ತೇವೆ. ಆದರೆ, ಈ ರೀತಿ ವಶಕ್ಕೆ ಪಡೆಯವುದು ಸರಿಯಲ್ಲ ಎಂದು ವಿರೋಧಿಸಿದ್ದಾರೆ.
ಈ ವೇಳೆ ಮನೆಯನ್ನು ಪರಿಶೀಲನೆ ನಡೆಸಲು ಮುಂದಾದ ವೇಳೆಯೂ ಸಹ ವಿರೋಧಿಸಿದ್ದು, ಪಟ್ಟು ಬಿಡದ ಪೊಲೀಸರು ಒಳಕ್ಕೆ ತೆರಳಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು, ಪೊಲೀಸ್ ಕಾರು ಹತ್ತದ ತಿಮರೋಡಿ ಸ್ವಂತ ಕಾರಿನಲ್ಲೇ ಗಿರೀಶ್ ಮಟ್ಟಣ್ಣನವರ್ ಜೊತೆಯಲ್ಲಿ ಪೊಲೀಸರೊಂದಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಬೆಳ್ತಂಗಡಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ. ಸ್ಥಳೀಯ ಠಾಣೆಯಲ್ಲಿ ಕಾನೂನು ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಆನಂತರ ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಹೇಳಲಾಗಿದೆ.
ಬಿ.ಎಲ್. ಸಂತೋಷ್ ವೈಯಕ್ತಿಕ ವಿಚಾರಗಳ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ತಿಮರೋಡಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಉಡುಪಿ ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದರನ್ವಯ ಎಫ್’ಐಆರ್ ದಾಖಲಾಗಿದ್ದು, ಇಂದು ಉಜಿರೆ ನಿವಾಸಕ್ಕೆ ಪಡೆದಿದ್ದಾರೆ.
ತಿಮರೋಡಿಯನ್ನು ವಶಕ್ಕೆ ಪಡೆಯುವ ಮುನ್ನ ಹೆಚ್ಚಿನ ಜಾಗ್ರತೆ ವಹಿಸಿರುವ ಪೊಲೀಸರು, 4-5 ಪೊಲೀಸ್ ಅಧಿಕಾರಿಗಳು ಹಾಗೂ ಹೆಚ್ಚಿನ ಸಿಬ್ಬಂದಿಗಳೊಂದಿಗೆ ತೆರಳಿದ್ದರು. ತಿಮರೋಡಿ ನಿವಾಸಕ್ಕೆ ತೆರಳಿದ ವೇಳೆ ಬೆಂಬಲಿಗರ ಕಡೆಯಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post