ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯಲ್ಲಿ ರಾಮೇಶ್ವರಂ ಕೆಫೆ ಸ್ಪೋಟ #RameshwaramCafeBlast ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್’ಐಎ #NIA ಅಧಿಕಾರಿಗಳು ಓರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಈ ಕುರಿತಂತೆ ಎನ್’ಐಎ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್’ಐಎ #NIA ತಂಡಗಳು ಭೇದಿಸಿದ ನಂತರ ದಾಳಿಯ ಸಹ ಸಂಚುಕೋರ ಮುಝಮ್ಮಿಲ್ ಶರೀಫ್ ಎಂಬಾತನನ್ನು ಬಂಧಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಮತ್ತು ಆತನ ಸಹಚರ ಅಬ್ದುಲ್ ಮಥೀನ್ ತಾಹಾ ಅವರ ಬಂಧನಕ್ಕೆ ಎನ್’ಐಎ ಬಲೆ ಬೀಸಿದೆ.
ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.
NIA Arrests 1 in Rameshwaram Cafe Blast Conspiracy After Massive Multi-State Raids pic.twitter.com/QI4ZpvBpQV
— NIA India (@NIA_India) March 28, 2024
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯುವ ಪ್ರಯತ್ನಗಳು ನಡೆಯುತ್ತಿದೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post