ಲಂಡನ್: ಇಲ್ಲಿನ ಪ್ರತಿಷ್ಠಿತ ಹಾಗೂ ಐಷಾರಾಮಿ ಹೊಟೇಲ್ ನಲ್ಲಿ ತಡರಾತ್ರಿ ಭಾರೀ ಅಗ್ನಿ ಅನಾಹುತ ಸಂಭವಿಸಿದ ಕುರಿತಾಗಿ ವರದಿಯಾಗಿದೆ.
ತಡರಾತ್ರಿ ಅಗ್ನಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಬೆಂಕಿಯ ಜ್ವಾಲೆ ತೀವ್ರವಾಗಿ ವ್ಯಾಪಿಸಿದೆ. ಸುಮಾರು 120ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು, ಮುಂಜಾನೆವರೆಗೂ ಕಾರ್ಯಾಚರಣೆ ನಡೆದಿತ್ತು ಎಂದು ವರದಿಯಾಗಿದೆ.
ಬೆಂಕಿಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಕುರಿತಾಗಿ ವರದಿಯಾಗಿಲ್ಲ.
Discussion about this post