ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಧರೆ ಕುಸಿದು ಭಾರಿ ದುರಂತ ಸಂಭವಿಸಿ ಮೂವರು ಕಾರ್ಮಿಕರು ಧಾರುಣವಾಗಿ ಸಾವನ್ನಪಿರುವ ಘಟನೆ ಜಿಲ್ಲೆಯ ಹುಲಿಕಲ್ ಘಾಟಿಯಲ್ಲಿ ನಡೆದಿದೆ.
ಹುಲಿಕಲ್ ಘಾಟಿಯ ದೇವಸ್ಥಾನದ ತಿರುವಿನ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಜಾರಿದ ಪರಿಣಾಮ ಈ ಅವಘಡ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ.
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದಿರುವ ಶಂಕೆ ವ್ಯಕ್ತವಾಗಿದ್ದು,ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
ಇನ್ನು ಸಂಬಂಧಪಟ್ಟ ಅಧಿಕಾರಿಗಳು ಮಣ್ಣಿನ ಬಗ್ಗೆ ಮಾಹಿತಿ ಇಲ್ಲದೆ ಕಾಮಗಾರಿ ಶುರು ಮಾಡಿದ್ದು ತಪ್ಪು ಎಂಬುದು ಸ್ಥಳೀಯರ ಅಕ್ರೋಶಕ್ಕೆ ಕಾರಣವಾಗಿದೆ.
ನಗರ ಪೊಲೀಸರು ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ರಕ್ಷಣಾ ತಂಡಗಳು ಮಣ್ಣಿನಡಿಯಲ್ಲಿ ಸಿಲುಕಿರುವವರಿಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















