ಕಲ್ಪ ಮೀಡಿಯಾ ಹೌಸ್ | ಮಲೇಗಾಂವ್ |
ಸಾವರ್ಕರ್ ಅವರು ನಮ್ಮ ಆರಾಧ್ಯ ದೈವ. ಅವರಿಗೆ ಮಾಡುವ ಅವಮಾನ ಸಹಿಸಲು ಸಾಧ್ಯವಿಲ್ಲ ಎಂದು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮಾಲೆಗಾಂವ್‌ನಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಾವರ್ಕರ್ ನಮ್ಮ ಆರಾಧ್ಯ ದೈವ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಾಗಿದೆ. ಆದರೆ, ಸಾವರ್ಕರ್ ಅವರ ಅವಮಾನವನ್ನು ಸಹಿಸಲಾಗುವುದಿಲ್ಲ. ಸಾವರ್ಕರ್ ಅವರು 14 ವರ್ಷಗಳ ಕಾಲ ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಊಹಿಸಲಾಗದ ಚಿತ್ರಹಿಂಸೆಯನ್ನು ಅನುಭವಿಸಿದರು. ಅವರ ನೋವುಗಳನ್ನು ನಾವು ಓದಬಹುದು. ಆದರೆ, ಇದು ತ್ಯಾಗದ ರೂಪವಾಗಿದೆ. ಸಾವರ್ಕರ್‌ಗೆ ಅವಮಾನ ಮಾಡುವುದರಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿಕ್ಕಟ್ಟು ಉಂಟಾಗಬಹುದು ಎಂದು ತಿಳಿಸಿದ್ದಾರೆ.
Also read: ಏಪ್ರಿಲ್‌ನಲ್ಲಿ ಬ್ಯಾಂಕ್‌ಗಳು ಎಷ್ಟು ದಿನ ಕಾರ್ಯನಿರ್ವಹಿಸುವುದಿಲ್ಲ ಗೊತ್ತಾ? ರಜೆ ಪಟ್ಟಿ ಇಲ್ಲಿದೆ ನೋಡಿ
ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ. ‘ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಹೆಸರು ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ‘ ಎಂದು ಹೇಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post