ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಪ್ರಮುಖವಾಗಿ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕುಗಳಲ್ಲಿ ಭಾರೀ ಪ್ರಮಾಣದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ಆದರೆ, ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಲ್ಲಿ ಇಂದೂ ಸಹ ಭಾರೀ ಪ್ರಮಾಣದಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜುಲೈ 25ರ ಮಂಗಳವಾರವೂ ಸಹ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜ್ಞಾಪನಾ ಪತ್ರ ಹೊರಡಿಸಿದ್ದು, ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ಶಾಲಾ ಎಸ್’ಡಿಎಂಸಿಯವರು ಮಳೆಯ ತೀವ್ರತೆ ಅನುಸಾರವಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ25ರಂದು ಅಗತ್ಯವಿರುವ ಪ್ರಾಥಮಿಕ/ಪ್ರೌಢಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಲು ಸೂಚನೆ ನೀಡಲಾಗಿದೆ.
ಮಾತ್ರವಲ್ಲ ಈ ರಜೆಯನ್ನು ಮುಂದಿನ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳುವಂತೆಯೂ ಸಹ ಸೂಚನೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post