ಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ |
ಶಿರಾಳಕೊಪ್ಪ ಬಸ್ ನಿಲ್ದಾಣ ಸಮೀಪ ನಾಡ ಬಾಂಬ್ ಇರಬಹುದು ಎಂದು ಶಂಕಿಸಲಾದ ವಸ್ತುವೊಂದು ಸ್ಫೋಟಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿಯ ಪುಟ್ ಪಾತ್’ನಲ್ಲಿ ಘಟನೆ ನಡೆದಿದ್ದು, ಇಬ್ಬರಿಗೆ ಗಾಯಗಳಾಗಿದ್ದು, ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾಗ್’ನಲ್ಲಿ ಇರಿಸಲಾಗಿದ್ದ ವಸ್ತು ಏಕಾಏಕಿ ಸ್ಪೋಟಗೊಂಡಿದ್ದು ಇದು ಶಿಕಾರಿಗೆ ಬಳಸುವ ಸ್ಪೋಟಕ ವಸ್ತು ಇರಬಹುದು ಎಂದು ಅನುಮಾನಿಸಲಾಗಿದೆ.
ಹಂದಿ ಶಿಕಾರಿಗೆ ಬಳಸುವ ನಾಡಾ ಬಾಂಬ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಶಿರಾಳಕೊಪ್ಪ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post