ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಬಾಲರಾಜ ಅರಸ್ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ.
ಬಾಲರಾಜ ಅರಸ್ ರಸ್ತೆಯ ಗಾಂಧಿ ಪಾರ್ಕ್ ಆವರಣದಲ್ಲಿದ್ದ ಬೃಹತ್ ಮರವೊಂದು, ಕಾಂಗ್ರೆಸ್ ಕಚೇರಿಗೆ ಹೋಗುವ ತಿರುವಿನಲ್ಲಿ ಉರುಳಿ ಬಿದ್ದಿದೆ.
ಇಲ್ಲಿರುವ ಸಾರ್ವಜನಿಕ ಶೌಚಾಲಯದ ಬದಿಯಲ್ಲಿದ್ದ ಈ ಮರ ರಸ್ತೆಗೆ ಉರುಳಿದ ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ.
ಘಟನೆಯಲ್ಲಿ ಬೈಕ್ ಸವಾರರೊಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
Also read: ದಲಿತರಿಗೆ ಮೀಸಲಿಟ್ಟ 312 ಕೋಟಿ ರೂ. ಹಿಂಪಡೆದು ಸಿದ್ದರಾಮಯ್ಯರಿಂದ ದ್ರೋಹ | ಈಶ್ವರಪ್ಪ ಗಂಭೀರ ಆರೋಪ
ದ್ವಿಪಥದ ಒಂದು ಬದಿಯಲ್ಲಿ ಮರ ಉರುಳಿದ ಪರಿಣಾಮ ಇನ್ನೊಂದು ಬದಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ಮಾಡಲಾಗಿದ್ದು, ವಾಹನ ದಟ್ಟಣೆ ಹೆಚ್ಚಾಗಿತ್ತು.
ಪಾಲಿಕೆ ಹಾಗೂ ಮೆಸ್ಕಾಂ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post