ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನ.8 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ.
ನ. 08 ರಂದು ಬೆ.08.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆ. 9.50ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11.00ಕ್ಕೆ ಶಿವಮೊಗ್ಗ ಸರ್ಕ್ಯೂಟ್ ಹೌಸ್‌ನಲ್ಲಿ ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಹಾಗೂ ಶಾಲ ಮಕ್ಕಳಿಗೆ ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಆನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.00ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post