ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಸಾಗರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಗೆ ನೂತನ ಜವಾಬ್ದಾರಿಗಳನ್ನು ಇಂದು ಘೋಷಣೆ ಮಾಡಲಾಯಿತು.
ಈ ಕುರಿತಂತೆ ಇಂದು ನಡೆದ ಸಭೆಯಲ್ಲಿ ನೂತನ ಜವಾಬ್ದಾರಿಗಳನ್ನು ಘೋಷಣೆ ಮಾಡಲಾಗಿದ್ದು, ಸಾಗರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಶ್ರೀಪಾದ ಅವರನ್ನು ಅಧ್ಯಕ್ಷರಾಗಿ ನಿಯೋಜಿಸಲಾಗಿದೆ.
ಇನ್ನು, ಲಾಲ್ ಬಹದ್ದೂರ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಉಪನ್ಯಾಸಕ ವಿಷ್ಣು ಶರ್ಮಾ ಹಾಗೂ ಇಂದಿರಾ ಗಾಂಧಿ ಕಾಲೇಜಿನ ಉಪನ್ಯಾಸಕ ಮಧು ಅವರನ್ನು ಉಪಾಧ್ಯಕ್ಷರನ್ನಾಗಿ ಘೋಷಿಸಲಾಗಿದೆ.
ನಗರ ಕಾರ್ಯದರ್ಶಿಯಾಗಿ ಅಭಿಷೇಕ್ ಎಂ ಶೆಟ್ಟಿ ಹಾಗೂ ಸಹ ಕಾರ್ಯದರ್ಶಿಯಾಗಿ ಸಚಿನ್ ಹೆಗಡೆ, ಅಕ್ಷಯ್ ಕುಮಾರ್ ಹಾಗೂ ಶಿಲ್ಪ ಇವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗದ ಸಂಘಟನಾ ಕಾರ್ಯದರ್ಶಿಗಳಾದ ವಿಜಯ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post