ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಘೋಷಿಸಲಾಗಿದ್ದ ಮಧ್ಯಾಹ್ನದ ಲಾಕ್ ಡೌನ್ ರದ್ದಾಗಿದ್ದು, ಇಂದಿನಿಂದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಇರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಇಂದಿನಿಂದ ಅನ್ ಲಾಕ್ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರದಂತೆ ಜಿಲ್ಲೆಯಲ್ಲೂ ಸಹ ಇಂದಿನಿಂದ ಯಾವುದೇ ರೀತಿಯ ಲಾಕ್ ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post