ಕಲ್ಪ ಮೀಡಿಯಾ ಹೌಸ್ | ಮಾಲೂರು |
ಸಣ್ಣ ಊರಿನ ಪತ್ರಕರ್ತರ #Journalist ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು.
ಪತ್ರಿಕಾ ದಿನಾಚರಣೆಯ ಅಂಗವಾಗಿ ಮಾಲೂರು ಪತ್ರಕರ್ತರ ಭವನಕ್ಕೆ ಭೂಮಿಪೂಜೆ ನೆರವೇರಿಸಿ, ಪತ್ರಕರ್ತರಿಗೆ ಅಭಿನಂದಿಸಿ ಮಾತನಾಡಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದು ಅದರ ವಿತರಣೆಯ ಕರಡು ನೀತಿ ಸಿದ್ದಗೊಳ್ಳುತ್ತಿದೆ. ತಾಲ್ಲೂಕು ಪತ್ರಕರ್ತರಿಗೆ, ಜಿಲ್ಲಾ ಪತ್ರಕರ್ತರಿಗೆ ಮತ್ತು ಗ್ರಾಮೀಣ ಪತ್ರಿಕೆಗಳಿಗೆ ಆದ್ಯಕೆ ಮೇರೆಗೆ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡಿ ಅತ್ಯಂತ ಕಡಿಮೆ ಅವಧಿಯಲ್ಲಿ ಮುಗಿಸಿ. ಮುಖ್ಯಮಂತ್ರಿಗಳೇ ಅದನ್ನು ಉದ್ಘಾಟಿಸುತ್ತಾರೆ. ಭವನ ನಿರ್ಮಾಣಕ್ಕೆ ನಾನೂ ಶಕ್ತಿ ಮೀರಿ ಸಹಕಾರ ನೀಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post