ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಮಧ್ಯಾಹ್ನ ನಗರದಲ್ಲಿ ನಡೆದ ಅಹಿತಕರ ಘಟನೆ ವೇಳೆಯಲ್ಲಿಯೇ ಗಾಂಧಿ ಬಜಾರ್’ನಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗಾಂಧಿ ಬಜಾರ್’ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಪ್ರೇಮ್ ಸಿಂಗ್ ಎನ್ನುವವರು, ಮನೆ ಕಡೆಗೆ ನಡೆದುಕೊಂಡು ಹೋಗುವ ವೇಳೆ ಬೈಕ್’ನಲ್ಲಿ ಬಂದ ಇಬ್ಬರು ಏಕಾಏಕಿ ಆತನಿಗೆ ಇರಿದು ಪರಾರಿಯಾಗಿದ್ದರು.

ಘಟನೆ ವಿಚಾರ ತಿಳಿದಾಕ್ಷಣ ಕಾರ್ಯಾಚರಣೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು, ಜೆಸಿ ನಗರದ ನದೀಮ್(25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್(25) ಎಂದು ಗುರುತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















