ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ರಾಷ್ಟ್ರ ಮಟ್ಟದ ಮಲ್ಟಿ ಕ್ಲಾಸ್ ಯೂತ್ ಸೈಲಿಂಗ್ ಅಂಡ್ ಕೈಟ್ ಬೋರ್ಡ್ ಚಾಂಪಿಯನ್‌ಶಿಪ್ ಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ಚಾಲನೆ ನೀಡಿದರು.
KRS ಹಿನ್ನೀರಿನಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಮಂಡ್ಯ ಜಿಲ್ಲಾಡಳಿತದ ಸಹಕಾರದೊಂದಿಗೆ, ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್(MEG) ಮತ್ತು ಜನರಲ್ ತಿಮ್ಮಯ್ಯ ರಾಷ್ಡ್ರೀಯ ಸಾಹಸ ಅಕಾಡೆಮಿ (GETHNAA) ಸಹಾಭಾಗಿತ್ವದಲ್ಲಿ ಸೈಲಿಂಗ್ ಚಾಂಪಿಯನ್ ಶಿಪ್ ನಡೆಯಲಿದೆ.


ಕೆ.ಆರ್.ಎಸ್ ಹಿನ್ನೀರಿನಲ್ಲಿ ಆಯೋಜಿಸಿರುವ ಮಲ್ಟಿಕ್ಲಾಸ್ ಯೂತ್ ಸೈಲಿಂಗ್ ಅಂಡ್ ಕೈಟ್ ಬೋಡ್೯ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಮುಂದಿನ ವರ್ಷ ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುವುದು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ತಿಳಿಸಿದರು.
ಅವರು ಇಂದು ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಅಂಡ್ ಸೆಂಟರ್ ಬೆಂಗಳೂರು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕೆ.ಆರ್.ಎಸ್. ಹಿನ್ನೀರಿನಲ್ಲಿ “YAI MULTI CLASS YOUTH SAILING (NATIONAL RANKING EVENT) & KITE BOARD CHAMPIONSHIP-2022” ಯನ್ನು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ: ನಾರಾಯಣ ಗೌಡ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದರು.

ಈ ಕ್ರೀಡೆಗೆ ಉತ್ತೇಜನ ನೀಡಲು ಬೇಕಿರುವ ವ್ಯವಸ್ಥೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಚಾಂಪಿಯನ್ ಶಿಪ್ ಪ್ರತಿವರ್ಷ ಕೆ.ಆರ್.ಎಸ್ ನಲ್ಲಿ ನಡೆಯುವುದರಿಂದ ಸ್ಥಳೀಯವಾಗಿ ಉದ್ಯೋಗ ಸಿಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್ ಪುಟ್ಟರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.










Discussion about this post