ಕಲ್ಪ ಮೀಡಿಯಾ ಹೌಸ್ | ಮಂಡ್ಯ/ಬೆಂಗಳೂರು |
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ H D Kumaraswamy ಸ್ಪರ್ಧೆ ಮಾಡುವುದು ಬಹುತೇಕ ಖಚಿತಗೊಂಡಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ಮಂಡ್ಯದಿಂದಲೇ ಕುಮಾರಸ್ವಾಮಿ ಸ್ಫರ್ಧೆ ಮಾಡುವ ವಿಚಾರದಲ್ಲಿ ನವದೆಹಲಿಗೆ ತೆರಳಿ ಈಗಾಗಲೇ ಬಿಜೆಪಿ ವರಿಷ್ಠರೊಂದಿಗೆ ಸ್ವತಃ ಅವರೇ ಚರ್ಚೆ ಮಾಡಿದ್ದಾರೆ. ಕುಮಾರಸ್ವಾಮಿ ಮಂಡ್ಯದಿಂದಲೇ ಸ್ಪರ್ಧಿಸುವುದು ಸೂಕ್ತ ಎಂಬ ಅಭಿಪ್ರಾಯ ಬಿಜೆಪಿ ಹೈಕಮಾಂಡ್’ನಿಂದ ಸಲಹೆ ದೊರೆತಿದೆ ಎನ್ನಲಾಗಿದೆ.
Also read: ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಸ್ಮರಿಸಿದ ಮಲೆನಾಡ ಶಕ್ತಿ ದೇವತೆ ಕ್ಷೇತ್ರ ಯಾವುದು?
ಮಾಹಿತಿಯಂತೆ ಕ್ಷೇತ್ರದಲ್ಲಿ ಜೆಡಿಎಸ್ ತೆಕ್ಕೆಯಲ್ಲಿ ಅಂದಾಜು 5 ಲಕ್ಷ ಮತಗಳಿವೆ. ಹೀಗಿದ್ದಾಗ ಸ್ವತಃ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಸ್ಪರ್ಧಿಸಿದರೆ ಬಿಜೆಪಿ ಮತಗಳೂ ಸಹ ಕ್ರೋಢೀಕರಣಗೊಂಡು ಅವರ ಗೆಲುವು ನಿಶ್ಚಿತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















