ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಗೆಜ್ಜಲಗೆರೆ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ #Software Engineer ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಸ್ವಾಮಿ ಲೇಔಟ್ ನಿವಾಸಿ ಅಶ್ವಿನಿ (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಕಾರು ಚಲಾಯಿಸುತ್ತಿದ್ದ ಪತಿ ಶ್ರೀಕಾಂತ್ ಭಟ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post