ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 25 ರಿಂದ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು SSLC-PUC Annual Exam ಮಾರ್ಚ್ 1 ರಿಂದ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಒತ್ತಡಕ್ಕೆ ಒಳಗಾಗದೇ ದೈರ್ಯವಾಗಿ ಪರೀಕ್ಷೆ ಬರೆಯುವಂತೆ ಸಜ್ಜುಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ DC Kumar ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಕಗಳ ಕಛೇರಿಯಲ್ಲಿ ನಡೆದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ವಾರ್ಷಿಕ ಪರೀಕ್ಷೆಗಳಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ. ಪರೀಕ್ಷೆಗಳಲ್ಲಿ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಿ. ಪರೀಕ್ಷಾ ಅಕ್ರಮಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ. ವಿದ್ಯಾರ್ಥಿಗಳು ಯಾವುದೇ ನಕಲು ಚೀಟಿ ಬಳಕೆಗೆ ಅವಕಾಶ ಮಾಡಿಕೊಡದಂತೆ ಸ್ವಂತವಾಗಿ ಪರೀಕ್ಷೆ ಬರೆಯಲು ತಯಾರಿ ಮಾಡಿ ಎಂದರು.
Also read: 543 ಸ್ಥಾನಗಳನ್ನೂ ಬಿಜೆಪಿಯೇ ಗೆಲ್ಲುತ್ತೇವೆ ಎನ್ನುವುದು ದೇಶಕ್ಕೆ ಒಳ್ಳೆಯದಲ್ಲ: ಮಲ್ಲಿಕಾರ್ಜುನ ಖರ್ಗೆ
ಸಭೆಯಲ್ಲಿ ಎ ಎಸ್.ಪಿ ತಿಮ್ಮಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್ ಶಿವರಾಮೇಗೌಡ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಚೆಲುವಯ್ಯ ಹಾಗೂ ಇನ್ನಿತರ ಶಿಕ್ಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post