ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ವಿವಿಧ ಸೈಬರ್ ಸೆಂಟರ್ ಹಾಗೂ ಗ್ರಾಮ ಒನ್ ಸೆಂಟರ್’ಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಣ ವಸೂಲಿ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ವತಃ ಪರಿಶೀಲನೆಗೆ ಮುಂದಾಗಿದ್ದಾರೆ. ಆರೋಪಗಳ ಹಿನ್ನೆಲೆಯಲ್ಲಿ ನಗರದ ಸೈಬರ್ ಸೆಂಟರ್ ಹಾಗೂ ಗ್ರಾಮ ಒನ್ ಸೆಂಟರ್’ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯೋಜನೆಯ ನೋಂದಣಿ ಕುರಿತಾಗಿ ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಉಪಸ್ಥಿತರಿದ್ದರು.
Also read: ಮಳೆ ಹಾನಿ ಪ್ರದೇಶ, ಸೈಕ್ಲೋನ್ ಶೆಲ್ಟರ್’ಗೆ ಉಡುಪಿ ಡಿಸಿ ವಿದ್ಯಾಕುಮಾರಿ ಭೇಟಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















