ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಜಿಲ್ಲೆಯ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜ Hanuma Dwaja ಕೆಳಗಿಳಿಸಿ, ರಾಷ್ಟ್ರಧ್ವಜ National Flag ಹಾರಿಸಿದ ತಾಲೂಕು ಅಧಿಕಾರಿಗಳ ನಡೆ ಭಾರೀ ಸಂಘರ್ಷಕ್ಕೆ ಕಾರಣವಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಮಧ್ಯೆ ಘಟನೆ ಖಂಡಿಸಿ ಇಂದು ಕೆರಗೋಡಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದ್ದು, ಫೆ.9ರಂದು ಮಂಡ್ಯ ನಗರ ಬಂದ್’ಗೆ ಹಿಂದೂ ಪರ ಸಂಘಟನೆಗಳೂ ಕರೆ ಕೊಟ್ಟಿವೆ. ಜನರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ ಘೋಷಣೆ ಮಾಡಿರುವುದರಿಂದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.

Also read: ರಾಮಾನುಜನ್ ಜೀವನಾಧರಿತ The man who knew infinity
ಈ ನಡುವೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ-ಜೆಡಿಎಸ್ ನಾಯಕರು ಭಾನುವಾರ ಕೆರಗೋಡಿಯಲ್ಲಿ ಪ್ರತಿಭಟನೆ ನಡೆಸಿದರು. ಹನುಮಧ್ವಜ ಹಾರಿಸುವ ಉದ್ದೇಶದಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದಾಗ ಅಶೋಕ್ ಸೇರಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post