ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ಮುಂದಿನ ಮೂರು ದಿನದಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ. ಹಾಗೂ ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆಯಿದೆ. ನದಿ ಪಾತ್ರದ ಜನರು ತಮ್ಮ ಆಸ್ತಿ ಪಾಸ್ತಿ ರಕ್ಷಣೆ ಮಾಡಿಕೊಳ್ಳುವಂತೆ ಕಾವೇರಿ ನೀರಾವರಿ ನಿಗಮ ಸೂಚನೆ ನೀಡಿದೆ.
ಕೆಆರ್‌ಎಸ್ ಜಲಾಶಯಕ್ಕೆ KRS Dam ಹರಿದು ಬರುವ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದ ಭರ್ತಿಯಾಗಲು ಇನ್ನು 5 ಅಡಿ ಮಾತ್ರ ಬಾಕಿ ಇದೆ. 49.452 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯಲ್ಲಿ 42.341 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಈಗಾಗಲೇ 119.44 ಅಡಿ ನೀರು ಸಂಗ್ರಹಗೊಂಡಿದೆ. ಒಳಹರಿವಿನ ಪ್ರಮಾಣ 38,858 ಕ್ಯೂಸೆಕ್‌ಗೆ ಏರಿಕೆಯಾಗಿದ್ದು, 3,453 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















