ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಇನ್ನು ಮುಂದೆ ನನ್ನ ಸಂಪೂರ್ಣ ಬೆಂಬಲ ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವದ ಬಿಜೆಪಿಗೆ ಎಂದು ಘೋಷಣೆ ಮಾಡುವ ಮೂಲಕ ತಮ್ಮ ಬಿಜೆಪಿ ಬೆಂವಲವನ್ನು ಸಂಸದೆ ಸುಮಲತಾ ಅಂಬರೀಶ್ MP Sumalath Ambrish ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾಲ್ಕು ವರ್ಷಗಳ ಕಾಲ ಎಲ್ಲವನ್ನೂ ಕಂಡು, ಅನುಭವಿಸಿ, ಅಭಿಪ್ರಾಯ ಸಂಗ್ರಹಿಸಿ, ಚಿಂತನೆ ನಡೆಸಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ಘೋಷಣೆ ಮಾಡಲು ನಿರ್ಧರಿಸಿದ್ದೇನೆ ಎಂದರು.

ಮೈ ಶುಗರ್ ಕಾರ್ಖಾನೆ ಮರು ಆರಂಭ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಹಳಷ್ಟು ಬಾರಿ ಕೈ ಹಿಡಿದಿದೆ. ಹೀಗಾಗಿ, ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಕೊಂಡೊಯ್ಯಲು ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ ಎಂದರು.












Discussion about this post