ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಈ ಚುನಾವಣೆಯಲ್ಲಿ ಮಂಡ್ಯದಿಂದ ಶೇ.100ಕ್ಕೆ 100ರಷ್ಟು ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯದಿಂದ ನಾಮಪತ್ರ ಸಲ್ಲಿಕೆ ಮಾಡಿದ ನಂತರ ಅವರಿಗೆ ಸಾಥ್ ನೀಡಿದ್ದ ವೇಳೆ ಯಡಿಯೂರಪ್ಪ #Yadiyurappa ಮಾತನಾಡಿದರು.
ಮಂಡ್ಯದಿಂದ ಕುಮಾರಸ್ವಾಮಿ ಅವರು ಗೆಲ್ಲುವುದು ಶೇ.100ರಷ್ಟು ನಿಶ್ಚಿತ. ಮಾತ್ರವಲ್ಲಿ ಡಾ.ಮಂಜುನಾಥ್ ಅವರೂ ಸಹ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.
Also read: ಅಭಿನವ ಶಂಕರಾಲಯದ ಶತಮಾನೋತ್ಸವ | ವಿವಿಧ ಹೋಮ, ಹವನ, ಪಾರಾಯಣ ಸಂಪನ್ನ
ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇದಕ್ಕಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೊಂದಿಗೆ ಚರ್ಚೆಗಳನ್ನು ನಡೆಸಲಾಗಿದ್ದು, ಒಟ್ಟಾಗಿ ಪ್ರಚಾರ ನಡೆಸಿ ಯಶಸ್ವಿಯಾಗುತ್ತೇವೆ ಎಂದರು.
ಇನ್ನು, ಸುಮಲತಾ #Sumalatha ಅವರ ನಾಳೆ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸೇರಲಿದ್ದು, ಅವರ ಸೇರ್ಪಡೆಯಿಂದ ದೊಡ್ಡ ಶಕ್ತಿ ಬಂದಂತಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post