ಕಲ್ಪ ಮೀಡಿಯಾ ಹೌಸ್ | ಮಂಡ್ಯ/ಕುಶಾಲನಗರ |
ದೇಶವೇ ಬೆಚ್ಚಿ ಬೀಳುವಂತಹ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ Fetal gender murder case ತನಿಖೆ ಚುರುಕುಗೊಂಡ ಬೆನ್ನಲ್ಲೇ ಆಯುಷ್ ಇಲಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಡಾ. ಸತೀಶ್ Dr. Satish ಎನ್ನುವವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಮೃತ ವೈದ್ಯನನ್ನು ಮಂಡ್ಯದ ಪಾಂಡವಪುರದ ಡಾ.ಸತೀಶ್ ಎಂದು ಹೇಳಲಾಗಿದ್ದು, ಕುಶಾಲನಗರ ತಾಲೂಕಿನ ಆನೆಕಾಡು ಬಳಿಯಲ್ಲಿ ಕಾರಿನಲ್ಲಿ ಇವರ ಮೃತದೇಹ ನಿನ್ನೆ ಪತ್ತೆಯಾಗಿತ್ತು. ಇವರ ಕೈನಲ್ಲಿ ಇಂಜಕ್ಷನ್ ಚುಚ್ಚಿದ ಗುರುತಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ನಿನ್ನೆ ಸಚಿವ ದಿನೇಶ್ ಗುಂಡೂರಾವ್ Minister Dinesh Gundurao ಹುಳ್ಳೇನಹಳ್ಳಿ ಆಲೆಮನೆಗೆ ಭೇಟಿ ನೀಡಿದ್ದ ವೇಳೆ ಸ್ಥಳೀಯರಿಂದ ಮಾಹಿತಿ ಕಲೆ ಹಾಕಿದ್ದರು. ಈ ಪ್ರಕರಣದಲ್ಲಿ ಡಾ.ಸತೀಶ್ ಎಂಬವರು ಸಹ ಭಾಗಿಯಾಗಿz್ದÁರೆ ಎಂದು ಸಚಿವರು ಆರೋಪ ಮಾಡಿದ್ದರು.











Discussion about this post