ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಮಹಾ ಕುಂಭಮೇಳದ ಅಂಗವಾಗಿ ಕೆ.ಆರ್ ಪೇಟೆಯಲ್ಲಿ ನಡೆದ ಮಂಡ್ಯ ಜಿಲ್ಲೆಯ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ.ಸುನೀಲ್ ಕುಮಾರ್ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಕೆ.ಆರ್ ಪೇಟೆಯ ಟೌನ್ ನಲ್ಲಿ ಜಾನಪದ ಕಲಾತಂಡಗಳೊಂದಿಗೆ ಮೂರು ಜ್ಯೋತಿ ರಥಗಳ ಸಂಗಮ, ಭವ್ಯ ಮೆರವಣಿಗೆ ಹಾಗೂ ಜಿಲ್ಲಾ ಉತ್ಸವ ಬೃಹತ್ ಮೆರವಣಿಗೆ ಕಾರ್ಯಕ್ರಮಕ್ಕೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ ಮೂಡಾ ಅಧ್ಯಕ್ಷ ಶ್ರೀನಿವಾಸ್, ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Also read: ಒಂದು ದಿನದ ಕ್ರೀಡಾಧಿಕಾರಿ ಅನುಭವ ಸಂತಸ ತಂದಿದೆ: ಸುಪ್ರೀತಾ ಆನಂದ್


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















