ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಯುವಕನೊಬ್ಬ ಕೆಎಸ್’ಆರ್’ಟಿಸಿ ಬಸ್ #KSRTC Bus ಚಕ್ರಕ್ಕೆ ಏಕಾಏಕಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರಿನ ಸರ್ಕಾರಿ ಬಸ್ ನಿಲ್ದಾಣದ ಬಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ #Suicide ಶರಣಾದ ಯುವಕನನ್ನು ಅರುಣ್ (23) ಎಂದು ಗುರುತಿಸಲಾಗಿದೆ.
Also read: ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇರಬಾರದು | ಕೆ.ಎಸ್. ಈಶ್ವರಪ್ಪ ಕಿಡಿ
ಸದರಿ ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ.
ಬಸ್ಸಿನ ಹಿಂಬದಿ ಚಕ್ರ ಯುವಕನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಅರುಣ್ ಸಾವನ್ನಪ್ಪಿದ್ದಾನೆ. ಯುವಕ ಆತ್ಮಹತ್ಯೆಗೆ ಶರಣಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post