ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕಾವೇರಿ ನದಿಯಲ್ಲಿ ಮುಳುಗಿ ಬಿಇ ವಿದ್ಯಾರ್ಥಿಯೊಬ್ಬರ ಸಾವನ್ನಪ್ಪಿರುವ #BE Student died ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ನಾಗನಹಳ್ಳಿ ಗ್ರಾಮದ ಎಸ್. ಶ್ರೇಯಸ್ ಎಂದು ಗುರುತಿಸಲಾಗಿದೆ.
Also read: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗ ರಚನೆಗೆ ಸಂಪುಟ ಒಪ್ಪಿಗೆ
ಮೃತ ಶ್ರೇಯಸ್ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿಇ ಓದುತ್ತಿದ್ದ. ಮೂವರು ಸ್ನೇಹಿತರ ಜೊತೆಗೆ ಬಲಮುರಿಗೆ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಈಜಲು ಬಾರದ ಹಿನ್ನೆಲೆ ಸ್ನೇಹಿತರು ನದಿ ದಡದಲ್ಲಿಯೇ ಕುಳಿತಿದ್ದರು. ಈಜು ಬರುತ್ತಿದ್ದರಿಂದ ಶ್ರೇಯಸ್ ಏಕಾಂಗಿಯಾಗಿ ನದಿಗಿಳಿದಿದ್ದ. ಈ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕೆಆರ್’ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post