ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ನಗದು ದರೋಡೆ #Robbery ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಬೂದನೂರು ಬಳಿ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ #Bangalore-Mysore National Highway ಸರ್ವೀಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಂಡ್ಯದ ಗುತ್ತಲು ನಿವಾಸಿ ವಿನೋದ್ ದರೋಡೆಗೆ ಒಳಗಾದವರು. ಬೆಲ್ಲದ ವ್ಯಾಪಾರಿಯಾದ ವಿನೋದ್ ವ್ಯಾಪಾರ ಮುಗಿಸಿಕೊಂಡು ಮದ್ದೂರಿನಿಂದ ಮಂಡ್ಯ ನಗರಕ್ಕೆ ಹಿಂದಿರುಗುವ ವೇಳೆ ಹಳೇ ಬೂದನೂರು-ಹೊಸ ಬೂದನೂರು ನಡುವಿನ ಕಾಲುವೆ ಬಳಿ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಕಾರಿನ ಗಾಜಿನ ಮೇಲೆ ಮೊಟ್ಟೆ ಹೊಡೆದು ವಾಹನ ಚಾಲನೆ ಮಾಡುತ್ತಿದ್ದ ವಿನೋದ್ ಅವರ ಕಣ್ಣಿಗೆ ಖಾರದ ಪುಡಿ ಎರಚಿದಾಗ ವಾಹನ ನಿಲ್ಲಿಸಲಾಗಿದೆ. ಈ ವೇಳೆ ವ್ಯಕ್ತಿಯ ಮೇಲೆರಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು 55 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.
Also read: MIT Manipal organized a Guest Talk on AI and the Future of the Humanity
ಘಟನಾ ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ತನಿಖೆ ಅರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post