No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಮಂಡ್ಯ ಕಬ್ಬು ಬೆಳೆಗಾರರಿಗೆ ಸಚಿವ ಜಾರ್ಜ್ ಗುಡ್ ನ್ಯೂಸ್ | ಏನದು?

kalpa News by kalpa News
January 8, 2025
in ಮಂಡ್ಯ
0
ಮಂಡ್ಯ ಕಬ್ಬು ಬೆಳೆಗಾರರಿಗೆ ಸಚಿವ ಜಾರ್ಜ್ ಗುಡ್ ನ್ಯೂಸ್ | ಏನದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  |

ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, #K J George ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್)ಗೆ ಸೂಚಿಸಿದ್ದಾರೆ.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ ಇಲಾಖೆಯ ಅಧಿಕಾಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು #Sugarcane ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ ಏಳು ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರಲ್ಲದೆ, ಪ್ರಸ್ತಾವನೆ ಆಧರಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಈ ಬಾರಿ ಹಿಂಗಾರಿನಲ್ಲಿ ಕೃಷಿ ಪ್ರದೇಶ ವಿಸ್ತರಣೆಯಾಗಲಿದ್ದು, ಹೆಚ್ಚುವರಿ ವಿದ್ಯುತ್ ಬೇಕಾಗುತ್ತದೆ ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ಆಧರಿಸಿ ಲೋಡ್ ಡಿಸ್ಪ್ಯಾಚ್ ಸೆಂಟರ್ ಮತ್ತು ಪಿಸಿಕೆಎಲ್ ನವರು ಲೆಕ್ಕ ಹಾಕಿದ್ದಾರೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಪ್ರದೇಶ ಕಳೆದ ಬಾರಿಗಿಂತ ಶೇ. 30ರಷ್ಟು ಏರಿಕೆಯಾಗಲಿದೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Also read: ಗಂಡಸರೇ ಹುಷಾರ್! ಮಹಿಳೆಯ ದೇಹ ರಚನೆ ಬಗ್ಗೆ ಕಾಮೆಂಟ್ ಮಾಡಿದ್ರೂ ಆಗತ್ತೆ ಲೈಂಗಿಕ ದೌರ್ಜನ್ಯ

ಕುಸುಮ್- ಸಿ ಗೆ ಭೂಮಿ ನೀಡಲು ಸೂಚನೆ:

ಕುಸುಮ್-ಸಿ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ 59 ಸಬ್ ಸ್ಟೇಷನ್ ಗಳಿದ್ದು, ಈ ಪೈಕಿ 37 ಕಡೆ ಫೀಡರ್ ಸೋಲರೈಸೇಷನ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ನಾಲ್ಕು ಯೋಜನೆಗಳ ಕೆಲಸ ಆರಂಭವಾಗಿದೆ. ಉಳಿದವುಗಳಿಗೆ ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಪೂರ್ಣಗೊಳಿಸಿ ರೈತರಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ಪೂರೈಸುವ ಕಾರ್ಯ ಮಾಡಬೇಕಾಗಿರುವುದರಿಂದ ಲಭ್ಯವಿರುವ ಸರ್ಕಾರಿ ಭೂಮಿಯನ್ನು ತ್ವರಿತವಾಗಿ ಒದಗಿಸುವಂತೆ ಸಭೆಯಲ್ಲಿದ್ದ ಜಿಲ್ಲಾಧಿಕಾರಿಗೆ ಸೂಚಿಸಿದರು.

ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆಯಡಿ 2023ರ ಸೆಪ್ಟೆಂಬರ್ ವರೆಗೆ 1,21,164 ಅರ್ಜಿಗಳು ಬಂದಿದ್ದು, 1,15,794 ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ 5,571 ಅರ್ಜಿಗಳನ್ನು ಮೂರು ತಿಂಗಳಲ್ಲಿ ಇತ್ಯರ್ಥಗೊಳಿಸಲಾಗುವುದು. ಆ ಬಳಿಕ ಅಕ್ರಮ-ಸಕ್ರಮಕ್ಕೆ 1,600 ಮಂದಿ ಅರ್ಜಿ ಸಲ್ಲಿಸಿದ್ದು, ಹಳೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸ ಅರ್ಜಿಗಳ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೇಸಿಗೆಯಲ್ಲಿ ವಿದ್ಯುತ್ ಖರೀದಿ:

ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಈ ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ. ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ತಲಾ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ಯೋಜನೆ ರೂಪಿಸಲಾಗಿದೆ. ದೀರ್ಘಾವದಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ. ಹೀಗಾಗಿ ಹೆಚ್ಚುವರಿ ವಿದ್ಯುತ್ತನ್ನು ಪೀಕ್ ಅವರ್ ನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಇಲಾಖೆಗೂ ಲಾಭವಾಗುತ್ತದೆ ಎಂದು ತಿಳಿಸಿದರು.

ವಿದ್ಯುತ್ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, “ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ”. “ಹೆಚ್ಚುವರಿ ಉಪಕೇಂದ್ರಗಳ ಸ್ಥಾಪನೆ, ಟ್ರಾನ್ಸ್ಫಾರ್ಮರ್ಗಳ ನವೀಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಪೂರೈಕೆ ಖರಿತಪಡಿಸಿಕೊಳ್ಳಲಾಗುವುದು” ಎಂದು ತಿಳಿಸಿದರು.

ಜನಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿರಬೇಕು:

ಸಭೆಯಲ್ಲಿ ಹಜರಿದ್ದ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, “ಜನರು ಸಾಮಾನ್ಯವಾಗಿ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳೊಂದಿಗೆ ಹೇಳಿಕೊಳ್ಳುತ್ತಾರೆ. ಆದ್ದರಿಂದ ಜನಪ್ರತಿನಿಧಿಗಳಿಗೆ ಜನರ ಸಮಸ್ಯೆಗಳ ಬಗ್ಗೆ ಸ್ಪಷ್ ಅರಿವಿರುತ್ತದೆ. ಹೀಗಾಗಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಆಧರಿಸಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ವಿವೇಕಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ. ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: K J GeorgeKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMandyaNews_in_KannadaNews_KannadaSugarcaneಇಂಧನ ಸಚಿವ ಕೆ.ಜೆ. ಜಾರ್ಜ್ಕಬ್ಬುಮಂಡ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಂಡಸರೇ ಹುಷಾರ್! ಮಹಿಳೆಯ ದೇಹ ರಚನೆ ಬಗ್ಗೆ ಕಾಮೆಂಟ್ ಮಾಡಿದ್ರೂ ಆಗತ್ತೆ ಲೈಂಗಿಕ ದೌರ್ಜನ್ಯ

Next Post

ಶಿಕ್ಷಣಕ್ಕೆ ಪೂರಕವಾದ ವಾತಾವರಣ ಲಭಿಸಿದಾಗ ಸುಶಿಕ್ಷಿತರಾಗಲು ಸಾಧ್ಯ

kalpa News

kalpa News

Next Post
ಶಿಕ್ಷಣಕ್ಕೆ ಪೂರಕವಾದ ವಾತಾವರಣ ಲಭಿಸಿದಾಗ ಸುಶಿಕ್ಷಿತರಾಗಲು ಸಾಧ್ಯ

ಶಿಕ್ಷಣಕ್ಕೆ ಪೂರಕವಾದ ವಾತಾವರಣ ಲಭಿಸಿದಾಗ ಸುಶಿಕ್ಷಿತರಾಗಲು ಸಾಧ್ಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL