ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಮದ್ದೂರಿನಲ್ಲಿ ಗಣಪತಿ ವಿಸರ್ಜನೆಯ ಮೆರವಣಿಗೆಯ ಮೇಲೆ ಕಲ್ಲು ತೂರಾಟ #Stone pelting on Maddur Ganapathi procession ಹಾಗೂ ಪ್ರತಿಭಟನಾ ನಿರತ ಹಿಂದೂಗಳ ಮೇಲೆ ಲಾಠಿಚಾರ್ಜ್ ನಡೆದ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಚರ್ಚಿಸಿದರು.
ಘಟನೆಯ ಸಂಬಂಧ ತಪ್ಪಿತಸ್ಥ ಕಿಡಿಗೇಡಿಗಳ ವಿರುದ್ಧ ಈವರೆವಿಗೂ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ಪಡೆಯಲಾಯಿತಲ್ಲದೇ, ಶಾಂತಿಯುತ ಗಣೇಶೋತ್ಸವದ ಮೆರವಣಿಗೆಯ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಹಿನ್ನಲೆಯ ಕುರಿತು ಮಾಹಿತಿ ಪಡೆದರು. ಕಾನೂನು ಸುವ್ಯವಸ್ಥೆ ವೈಫಲ್ಯದ ಕುರಿತು ಈ ಸಂಬಂಧ ಜಿಲ್ಲಾಡಳಿತಕ್ಕೆ ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್ ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ T ನಾರಾಯಣಸ್ವಾಮಿ, ಮಾಜಿ ಸಚಿವ C T ರವಿ, ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು,ಶಾಸಕ ಎಂ. ಕೃಷ್ಣಪ್ಪ, ರಾಜ್ಯ ಪ್ರಕೋಷ್ಠ ಸಂಯೋಜಕ ಎಸ್. ದತ್ತಾತ್ರಿ, ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಕುಮಾರ್, ಮುಖಂಡ ಎಸ್.ಪಿ. ಸ್ವಾಮಿ, ಇಂಡವಾಳು ಸಚ್ಚಿದಾನಂದ್ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post