ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಬಳಲುತ್ತಿರುವವರ ಜನರ ಕಷ್ಟಕ್ಕೆ ಸ್ಪಂದಿಸಬೇಕು, ಅವರಿಗೆ ಚಿಕಿತ್ಸಾ ಸಮಯದಲ್ಲಿ ಯಾವುದೇ ರೀತಿಯ ತೊಂದರೆ ಬಾರದಂತೆ ಕ್ರಮವಹಿಸಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಹೇಳಿದರು.
ಇಂದು ಜಿಲ್ಲಾ ಪಂಚಾಯತ್‍ನ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲಾ ಅಭಿವೃದ್ದಿ ಕಾಮಗಾರಿಗಳು ಹಾಗೂ ಕೋವಿಡ್-19ರ ನಿಯಂತ್ರಣ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್‍ನಿಂದ ಮೃತಪಟ್ಟವರಿಗೆ ನೀಡುವ ಪರಿಹಾರವನ್ನು ಸೂಕ್ತ ಸಮಯದಲ್ಲಿ ನೀಡಲಾಗಿದೆಯೇ ಎಂದು ಪರಿಶೀಲಿಸಿ ಹಾಗೂ ಬಾಕಿ ಉಳಿದಿರುವ ಮೃತ ಕುಟುಂಬಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮಳೆಯಿಂದಾಗಿ ಕೃಷಿಯಲ್ಲಿ ಆಗಿರುವಂತಹ ಹಾನಿಯ ಬಗ್ಗೆ ಚರ್ಚಿಸಿದ ಅವರು, ಮಳೆಯಿಂದ ಹಾನಿಯಾಗಿರುವ ಮನೆ ಮತ್ತು ಕೃಷಿಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸುವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ತಾಲ್ಲೂಕಿನ ಕೆರೆಕಟ್ಟೆ ಹಾಗೂ ಮನೆಗಳ ದುರಸ್ತಿಯನ್ನು ಪರಿಶೀಲಿಸಿ ಕ್ಷಿಪ್ರಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಾಲೆ, ಆಸ್ಪತ್ರೆಗಳು ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಬಳಕೆಯಾಗುವ ವಿದ್ಯುತ್‍ನ್ನು ಕಡಿತಗೊಳಿಸದೆ ಮಾರ್ಗ ಸೂಚಿಯನ್ನು ಅನುಸರಿಸಬೇಕು ಎಂದರು.
ಸದರಿ ಸಭೆಯಲ್ಲಿ ನಿರ್ಣಯವಾದಂತಹ ಅಂಶಗಳನ್ನು ಅನುಷ್ಟಾನಗೊಳಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುವಂತೆ ತಿಳಿಸಿದರು.
ಸಭೆಯಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣ ಗೌಡ, ವಿಧಾನಸಭಾ ಸದಸ್ಯರಾದ ಡಾ.ಕೆ. ಅನ್ನದಾನಿ, ಸಿ.ಕೆ ಪುಟ್ಟರಾಜು, ಡಿ.ಸಿ ತಮ್ಮಣ್ಣ, ಎಂ.ಶ್ರೀನಿವಾಸ್, ಸುರೇಶ್ ಗೌಡ, ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯಾ ಪ್ರಭು, ಜಿಲ್ಲಾಪೊಲೀಸ್ ವರಷ್ಠಾಧಿಕಾರಿ ಎನ್.ಯತೀಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post