ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕೆಲಸ ಕೊಡಿಸೋದಾಗಿ ಹೇಳಿ ಮಂಡ್ಯ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆತಂದು ಆಕೆಯನ್ನು ವೇಶ್ಯಾವಾಟಿಕೆಗೆ ದೂಡಿರುವ ಘಟನೆ ನಡೆದಿದೆ.
ಪ್ರಿಯಕರನೇ ಯುವತಿಯನ್ನು ಮಂಡ್ಯದಿಂದ ಬೆಂಗಳೂರಿಗೆ ಕರೆ ತಂದಿದ್ದು, ಮಂಜುಳಾ ಎಂಬಾಕೆ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದಳು. ಈ ವೇಳೆ ತನ್ನ ಮೇಲೆ ಏಕಕಾಲದಲ್ಲಿ ಐದಾರು ಜನ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಎಂದು ಯುವತಿ ವಿಚಾರಣೆ ಸಂದರ್ಭದಲ್ಲಿ ಪೊಲೀಸರಿಗೆ ಹೇಳಿದ್ದಾಳೆ ಎನ್ನಲಾಗಿದೆ.
ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ನ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post