ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದೆ.
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಇಂದು ಮಿಮ್ಸ್ ನ ಐ.ಸಿ.ಯು.ನಲ್ಲಿ ಮಗುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಮಗುವಿಗೆ ಉತ್ತಮ ಚಿಕಿತ್ಸೆ ನೀಡುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ಅವರು ಮಗು ಅವಧಿಗೆ ಮುನ್ನವೇ ಜನಿಸಿರುವ ಹಿನ್ನೆಲೆಯಲ್ಲಿ ಮಗುವಿನ ತೂಕ 1.50 ಕೆ.ಜಿ ಮಾತ್ರ ಇದ್ದು, ಮಗುವಿನ ತೂಕ ಹೆಚ್ಚಳವಾಗುವವರೆಗೆ ಒಂದು ವಾರ ಐ.ಸಿ.ಯು ನಲ್ಲಿ ಚಿಕಿತ್ಸೆ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

 
	    	




 Loading ...
 Loading ... 
							



 
                
Discussion about this post