ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ನಾಯಕರಲ್ಲಿ ನಡುಕ ಶುರುವಾಗಿದ್ದು, ಬೇರೆ ದಾರಿಯಿಲ್ಲದೇ ವೈಯಕ್ತಿಕ ಟೀಕೆಗೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ಕಿಡಿ ಕಾರಿದ್ದಾರೆ.
ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ವರು, ನಮ್ಮ ಮೈತ್ರಿಯಿಂದಾಗಿ ಕಾಂಗ್ರೆಸ್’ಗೆ ಭಯ ಆರಂಭವಾಗಿದೆ. ಅವರ ಅಸ್ಥಿತ್ವದ ಬಗ್ಗೆ ಅವರಲ್ಲಿ ಆತಂಕ ಕಾಡುತ್ತಿದೆ. ನಮ್ಮ ವಿರುದ್ಧ ಬೇರೇನೂ ಮಾಡಲು ಸಾಧ್ಯವಾಗದೇ ವೈಯಕ್ತಿಕ ಟೀಕೆಗಳಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷವನ್ನು ಮಣಿಸುವ ಉದ್ದೇಶದಿಂದ ಹಳೇ ಮೈಸೂರು ಭಾಗದಲ್ಲಿ ಕುತಂತ್ರಗಾರಿಕೆ ಮಾಡುತ್ತಿದ್ದಾರೆ. ಅವರು ಏನೇ ಮಾಡಿಕೊಂಡರೂ ನಮ್ಮನ್ನು ಸೋಲಿಸಲು ಸಾಧ್ಯವಾಗಲ್ಲ, ಅವರ ಗುರಿ ತಲುಪಲು ಅವರಿಗೆ ಆಗುವುದಿಲ್ಲ ಎಂದು ಕಟಕಿಯಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















