ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿದ ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್’ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್. ಪೇಟೆ ತಾಲೂಕಿನಲ್ಲಿ 1, ನಾಗಮಂಗಲ ತಾಲೂಕಿನಲ್ಲಿ 2 ಸ್ಕ್ಯಾನಿಂಗ್ ಸೆಂಟರ್’ಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.
Also read: ಫೆ.23,24: ಶ್ರೀರಂಗಪಟ್ಟಣ ಶ್ರೀ ನಿಮಿಷಾಂಬ ದೇವರ ಮಾಘ ಶುದ್ಧ ಹುಣ್ಣಿಮೆ | ಅದ್ದೂರಿ ಸಿದ್ಧತೆ
ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್, 32 ಲ್ಯಾಬ್, 130 ಕ್ಲಿನಿಕ್’ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post