ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದು ಎಂದು ಎಲ್ಲಿದೆ? ಅವರೂ ಭಾರತದ ಪ್ರಜೆಗಳಲ್ಲವೇ? ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬ್ರಾಹ್ಮಣರು ಕಡಿಮೆಯಿದ್ದಾರೆ ಎಂಬ ಕಾರಣಕ್ಕೆ ಏನು ಮಾತನಾಡಿದರೂ ನಡೆಯುತ್ತದೆ ಎಂದು ಎಲ್ಲರೂ ಮಾತನಾಡುತ್ತಾರೆ. ಆದರೆ, ಯಾರ ವಿರುದ್ಧವಾದರೂ ಮಾತನಾಡುವಾಗ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಪ್ರಜಾಪ್ರಭುತ್ವದಲ್ಲಿ ಯಾರಿಗೂ ಅನ್ಯಾಯವಾಗಬಾರದು ಎಂದಿದ್ದಾರೆ.
ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಬರುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಹೆಚ್ಚಾಗುತ್ತವೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರೆಷ್ಟಿದ್ದಾರೆ. ಎಷ್ಟು ಮಂದಿಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿದೆ ಎಂದು ಪ್ರಶ್ನಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post