ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ರಾಜ್ಯ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂತಹ ಸಂದರ್ಭದಲ್ಲಿ ರಣಕಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಂಟ್ರಿ ಕೊಟ್ಟಿದ್ದಾರೆ.
ಸಕ್ಕರೆ ನಾಡು ಮಂಡ್ಯಕ್ಕೆ ಇಂದು ಭೇಟಿ ನೀಡಿರುವ ಯೋಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ ವೃತ್ತದವರೆಗೂ ಸುಮಾರು 500 ಮೀಟರ್ ರೋಡ್ ಶೋ ನಡೆದಿದೆ.
ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಹಲವು ಪ್ರಯತ್ನಗಳು, ತಂತ್ರಗಳನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ದೇಶ ಮಟ್ಟದಲ್ಲಿ ಬಿಜೆಪಿಯ ವರ್ಚಸ್ವಿ ನಾಯಕ ಬುಲ್ಡೋಜರ್ ಬಾಬಾ ಎಂದೇ ಕರೆಯಲ್ಪಡುವ ಯೋಗಿ ಆದಿತ್ಯನಾಥ್ ಅವರನ್ನು ಕರೆಸಿ ಪ್ರಚಾರ ನಡೆಸಲಾಗುತ್ತಿದೆ.
Also read: ಮಕ್ಕಳಿಗೆ ಮೊಬೈಲ್ ನೀಡುವ ಮುನ್ನ ಈ ಶಾಕಿಂಗ್ ಸುದ್ದಿ ತಪ್ಪದೇ ಓದಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post