ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಆಕಸ್ಮಿಕವಾಗಿ 14ನೆಯ ಮಹಡಿಯಿಂದ ಕೆಳಕ್ಕೆ ಬಿದ್ದ ಯುವಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಕೆಪಿಟಿ ಬಳಿಯ ಅಪಾರ್ಟ್ಮೆಂಟ್’ವೊಂದರಲ್ಲಿ ಘಟನೆ ನಡೆದಿದ್ದು, ಮೃತ ಯುವಕನನ್ನು ಮೊಹಮದ್ ಶಮಾಲ್(21) ಎಂದು ಗುರುತಿಸಲಾಗಿದೆ.
ರಂಜಾನ್ ಹಿನ್ನೆಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿ, ಮನೆಯ ಬಾಲ್ಕನಿಗೆ ಹೋಗಿದ್ದಾನೆ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Also read: ಮನೆಯಿಂದಲೇ ಮತ ಚಲಾವಣೆಗೆ ಅವಕಾಶ: ಮಡಿಕೇರಿಯಲ್ಲಿ ಅಂಚೆ ಮತಪತ್ರ ವಿತರಣೆ ಆರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post