ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಯುವತಿಯೊಬ್ಬರು ಹೊಸ ಮನೆ ಖರೀದಿಸಿ, ಅದ್ದೂರಿಯಾಗಿ ಗೃಹ ಪ್ರವೇಶ ಮಾಡಿದ ಯುವತಿಯೊಬ್ಬರು ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಂಗಳೂರಿನ ಕುಂಪಲ ಚಿತ್ರಾಂಜಲಿ ನಗರದಲ್ಲಿ ಘಟನೆ ನಡೆದಿದ್ದು, ಮೃತ ಯುವತಿಯನ್ನು ಪರಂಗಿಪೇಟೆಯ ನಿವಾಸಿ ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆಯೇನು?
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದರು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಮನೆಯೊಂದನ್ನು ಖರೀದಿಸಿ ಜೂನ್ 3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು ಎನ್ನಲಾಗಿದೆ. ಅದೇ ಮನೆಯ ಕೋಣೆಯಲ್ಲಿ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
Also read: ಲಿವ್ ಇನ್ ಪಾರ್ಟ್ನರ್‌ನನ್ನು ಕೊಂದು, ತುಂಡು ಮಾಡಿದ ಕ್ರೂರಿ ಅದನ್ನು ಮಾಡಿದ್ದೇನು? ತಿಳಿದರೆ ಬೆಚ್ಚಿ ಬೀಳುತ್ತೀರಿ!
ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಾರೆ ಎನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.
ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ ಎನ್ನಲಾಗಿದ್ದು, ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post