ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಸುರತ್ಕಲ್‌ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ ಐದು ಜನ ಬಜರಂಗ ದಳ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ನಿನ್ನೆ ಸಂಜೆ ಎಂಬಿಬಿಎಸ್ ವಿದ್ಯಾರ್ಥಿಗಳು ಸಮುದ್ರ ತೀರಕ್ಕೆ ಭೇಟಿ ನೀಡಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
#Mangaluru Five Bajrang Dal activists arrested for ‘moral policing’ at Surathkal. MBBS students of K S Hegde Medical college were heckled by these BD activists when they were returning after visiting a beach @vinndz_TNIE @XpressBengaluru @santwana99 @compolmlr @CMofKarnataka pic.twitter.com/S4vsGpNeOH
— Divya Cutinho_TNIE (@cutinha_divya) September 28, 2021
ಘಟನೆ ಹಿನ್ನೆಲೆ:
ಮಂಗಳೂರಿನ ಮೆಡಿಕಲ್ ಕಾಲೇಜೊಂದರ ಹಿಂದೂ-ಮುಸ್ಲಿಂ ಯುವಕ-ಯುವತಿಯರ ೬ ಜನ ಸ್ನೇಹಿತರ ಗುಂಪು ನಿನ್ನೆ ಸಂಜೆ ಮಲ್ಪೆ ಬೀಚ್‌ಗೆ ಹೋಗಿ ವಾಪಸ್ ಬರುವಾಗ ಸುರತ್ಕಲ್ ಟೋಲ್‌ಗೇಟ್ ಬಳಿ ಭಜರಂಗ ದಳ ಕಾರ್ಯಕರ್ತರು ಇವರನ್ನು ತಡೆದು, ಪ್ರಶ್ನಿಸಲು ಮುಂದಾದರು.
ಕಾರಿನಲ್ಲಿದ್ದ ಯುವತಿಯರಿಗೆ ಮುಸ್ಲಿಂ ಯುವಕರ ಜೊತೆ ಏಕೆ ಸುತ್ತಾಡುತ್ತಿದ್ದೀರಿ ಎಂದು ಪ್ರಶ್ನಿಸಿ ನಿಂದಿಸಿದ್ದಾರೆ. ಹಾಗೂ ಈ ವೇಳೆ ಹಿಂದೂ ಸಂಘಟನೆ ಯುವಕರು ಮತ್ತು ಮುಸ್ಲಿಂ ಯುವಕರ ನಡುವೆ ಮಾತಿನ ಜಟಾಪಟಿ ಆರಂಭವಾಗಿ ಅನ್ಯಕೋಮಿನ ಯುವಕ, ಯುವತಿಯರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಸ್ಥಳದಲ್ಲಿ ಇನ್ಸ್ಪೆಕ್ಟರ್ ಶರೀಫ್ ಇದ್ದು, ಹಿಂದೂ ಸಂಘಟನೆ ಯುವಕರಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಶರೀಫ್ ಕಾರಿನ ಮೇಲೆ ಯುವಕರ ಗುಂಪಿನಿಂದ ಆಗುತ್ತಿದ್ದ ದಾಳಿ ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post