ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ MLA Harish Poonja ಮೇಲೆ ದುಷ್ಕರ್ಮಿಳು ತಲ್ವಾರ್’ನಿಂದ ಹಲ್ಲೆ ಯತ್ನ ನಡೆಸಿದ್ದು, ಅದೃಷ್ಟವಷಾತ್ ಶಾಸಕರು ಪಾರಾಗಿದ್ದಾರೆ.
ನಿನ್ನೆ ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ವಿಮಾನ ನಿಲ್ದಾಣದಿಂದ ಶಾಸಕರು ಬೆಳ್ತಂಗಡಿಗೆ ತೆರಳುತ್ತಿದ್ದರು. ತಮ್ಮ ಸ್ನೇಹಿತರ ಕಾರಿನಲ್ಲಿ ಅವರು ತೆರಳುತ್ತಿದ್ದ, ಶಾಸಕರ ಅಧಿಕೃತ ಕಾರು ಹಿಂಬಾಲಿಸುತ್ತಿತ್ತು. ಈ ವೇಳೆ ಪರಂಗಿಪೇಟೆ ಪ್ರದೇಶದಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ತಲ್ವಾರ್’ಗಳಿಂದ ದಾಳಿಗೆ ಯತ್ನಿಸಿದೆ.
ಒಂದು ಹಂತದಲ್ಲಿ ಶಾಸಕರ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕರು ಅಧಿಕೃತ ಕಾರಿನಲ್ಲಿ ಇಲ್ಲದೇ ಇದ್ದುದು ದೊಡ್ಡ ಅನಾಹುತವೊಂದು ತಪ್ಪಿದೆ ಎಂದೇ ಹೇಳಲಾಗುತ್ತಿದೆ.
ಪಡೀಲ್ನಿಂದ ಫರಂಗಿಪೇಟೆಯವರೆಗೆ ಕಾರು ಬೆನ್ನೆತ್ತಿದ ದುಷ್ಕರ್ಮಿಗಳು ಈ ವೇಳೆ ಪಡೀಲ್ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳ ತಂಡ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಬೆನ್ನಟ್ಟಿದೆ. ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವಾಚ್ಯವಾಗಿ ಬೈದು ತಲವಾರು ಝಳಪಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
Also read: ಮುರುಘಾ ಶ್ರೀ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ: ಮಠದ ಸುತ್ತಮುತ್ತ ಬಿಗಿ ಭದ್ರತೆ
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post