ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ನಿಷೇಧಿತವಾಗಿರುವ ಪಿಎಫ್’ಐ ಸಂಘಟನೆ ಮತ್ತೆ ಆಕ್ಟೀವ್ ಆಗಿದೆ ಎಂಬ ಅನುಮಾನಗಳ ನಡುವೆಯೇ ಮುಸ್ಲಿಂ ಧರ್ಮಗುರುವನ್ನು ನಗರದಲ್ಲಿ ಬಂಧಿಸಲಾಗಿದೆ.
ನಿಷೇಧಿತ ಪಿಎಫ್`ಐಗೆ ಸಂಬಂಧಿಸಿದಂತೆ ವಾಟ್ಸಪ್ ಗುಂಪೊಂದನ್ನು ರಚಿಸಿ, ಅದರ ಸದಸ್ಯರಿಗೆ ಮತ್ತೆ ಚಟುವಟಿಕೆ ಆರಂಭಿಸಲು ಪ್ರಚೋಚನೆ ನೀಡಲಾಗುತ್ತಿದೆ ಎಂಬ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಳ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಭೂಗತರಾಗಿರುವ ಪಿಎಫ್’ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್ ಸಲ್ಮಾನ್ ಸಲಾಂ ಎಂಬ ವಾಟ್ಸಾಪ್ ಗ್ರೂಪ್ ರಚಿಸಿ ಪಿಎಫ್’ಐ ಸಂಘಟನೆಯ ಬಗ್ಗೆ ಸಂಘಟನೆಯ ಪುನರ್ ರಚನೆಯ ಬಗ್ಗೆ ಪ್ರಚಾರ ಮಾಡುತ್ತಿದ್ದ. ಭೂಗತರಾಗಿರುವ ಪಿಎಫ್’ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್, ಮತ್ತೆ ಚಟುವಟಿಕೆ ಆರಂಭಿಸಲು ಪ್ರಚೋದನೆ ನೀಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ.
ಈತನನ್ನು ಮಂಗಳೂರಿನ ಉರ್ವಾಸ್ಟೋರ್ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತನ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿ, ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಅ.24 ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post