ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯವಾಗಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ.
ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ ಸವಾರರಿಬ್ಬರಿಗೆ ಕಾಲು, ತಲೆ ಭಾಗಕ್ಕೆ ಗಾಯವಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಗಾಯಾಳುಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post