ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ನಗರದ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ನಡೆದಿದೆ.
ಮೃತರನ್ನು ಮಂಜೇಶ್ವರ ತಾಲೂಕಿನ ಪಾನತ್ತೂರಿನ ನಿವಾಸಿ ಸುಧೀಶ್ ಸಿ.ಕೆ. (26) ಎಂದು ಗುರುತಿಸಲಾಗಿದೆ. ಇವರು ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಿಗ್ಗೆ ತಮ್ಮ ಮನೆಯಿಂದ ಕೆಲಸದ ನಿಮಿತ್ತ ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಅತಿವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಮುಂದೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಸುಧೀಶ್ ಚಾಲನೆ ಮಾಡುತ್ತಿದ್ದ ಬೈಕ್ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ತಲೆಗೆ ಗಂಭೀರ ಗಾಯಗಳಾಗಿವೆ.
Also read: ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆ
ಸ್ಥಳೀಯರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದರೂ, ಅಧಿಕ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Comments 2