ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಭಾರೀ ಮಳೆಯ #Heavy rain ಹಿನ್ನೆಲೆಯಲ್ಲಿ ಬೃಹತ್ ಮರವೊಂದು ರಸ್ತೆ ಉರುಳಿಬಿದ್ದ ಪರಿಣಾಮ ಚಾರ್ಮಾಡಿ ಘಾಟ್ #Charmadi Ghat ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಘಟನೆ ನಡೆದಿದ್ದು, ಈ ಭಾಗದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.
Also read: ರಾಷ್ಟ್ರ ಮಟ್ಟದ ಸಿಎ ಪರೀಕ್ಷೆ: ಕ್ರೈಸ್ಟ್ಕಿಂಗ್ ವಿದ್ಯಾರ್ಥಿ ಪ್ರತೀತ್ ಮೊದಲ ಪ್ರಯತ್ನದಲ್ಲಿ ತೇರ್ಗಡೆ
ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿ ತೆರಳುವ ವಾಹನ ಸವಾರರು ಮಾರ್ಗ ಬದಲಿಸುವುದು ಉತ್ತಮ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post