ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಹತ್ಯೆ ಮತ್ತು ಕೋಮು ಗಲಭೆಯಲ್ಲಿ ಭಾಗಿಯಾಗುವ ಆರೋಪಿಗಳ ಆಸ್ತಿಮುಟ್ಟುಗೋಲು ಮಾಡಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ADGP Alok Kumar ಹೇಳಿದರು.
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿನ್ನೆ ದ.ಕ, ಉಡುಪಿ ಹಾಗೂ ಮಂಗಳೂರು ಕಮಿಷನರೇಟ್‌ನ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು. ಪದೇ ಪದೇ ಕೋಮು ಸಂಘರ್ಷ ಉಟಾಗುವುದನ್ನು ತಪ್ಪಿಸಲು ಇಂತಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ ಎಂದರು.
ಕೋಮುಗಲಭೆಯಲ್ಲಿ ಪಾಲ್ಗೊಂಡಿದ್ದ ಕೆಲವೊಂದು ಆರೋಪಿಗಳು ತಲೆಮರೆಸಿಕೊಂಡಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ಪಿಂಕಿ ನವಾಜ್ ಹತ್ಯೆ ಯತ್ನ ಪ್ರಕರಣ ಆರೋಪಿ ನೌಷಾದ್ ಎಂಬಾತ ತಲೆಮರೆಸಿಕೊಂಡಿರುರುವ ಬಗ್ಗೆ ತಿಳಿದುಬಂದಿದೆ. ಇಂತಹ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.
Also read: ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್
ಶರತ್ ಮಡಿವಾಳ, ದೀಪಕ್ ರಾವ್, ಪಿಂಕಿ ನವಾಜ್ ಹತ್ಯೆ ಯತ್ನದಂತಹ ಅನೇಕ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ. ಕೆಲವೊಮ್ಮೆ ಆರೋಪಿಗಳು ಜಾಮೀನು ಪಡೆದು ಹೊರಬರುವುದು, ತನಿಖೆ ಸರಿಯಾಗಿ ನಡೆಯದ ಕೇಸ್ ಖುಲಾಸೆಯಾಗಿ ಹೊರಬಂದು ಆರೋಪಿಗಳು ಮತ್ತೆ ಅಂತಹ ಕೃತ್ಯ ಮುಂದುವರಿಸುವುದು ಆಗಬಾರದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post