ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಪ್ರಜಾಪ್ರಭುತ್ವದ ಮೂಲ ಘಟಕ ಪಂಚಾಯತ್ ರಾಜ್ ವ್ಯವಸ್ಥೆಯಾಗಿದ್ದು, ಪ್ರಜಾಪ್ರಭುತ್ವ ಕೆಲಸ ಮಾಡುತ್ತಿರುವ ರೀತಿಯನ್ನು ಇಲ್ಲಿ ಕಾಣಬಹುದಾಗಿದೆ, ಬುದ್ದ, ಬಸವಣ್ಣ, ನಾರಾಯಣಗುರುಗಳ ತತ್ವದ ಮೇಲೆ ಪಂಚಾಯತ್ ರಾಜ್ ವ್ಯವಸ್ಥೆ ಸ್ಥಾಪನೆ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ Minister Priyanka Kharge ಹೇಳಿದರು.
ಮಂಗಳೂರಿನ ಪುರಭವನದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು.

Also read: ಕ್ರಿಕೆಟ್ ವಿಶ್ವ ಕಪ್ ಫೈನಲ್‍ಗೆ ಭಾರತ: ತಂಡಕ್ಕೆ ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಪಂಚಾಯತಿಗಳ ವ್ಯವಸ್ಥೆಯ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯಕ್ರಮ ಹಾಕಿಕೊಳ್ಳಲು ನಿಮ್ಮಅನುಭವಗಳನ್ನು ಕೇಳಿದಾಗ ಮಾತ್ರ ಒಳ್ಳೆಯ ನೀತಿಗಳನ್ನು ರೂಪಿಸಲು ಸಾಧ್ಯವಾಗುತ್ತದೆ. ಏಕೆಂದರೆ ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ ಎಂದೂ ಅವರು ಹೇಳಿದರು.

ಮಲೆನಾಡು, ಕರಾವಳಿ ಭಾಗದಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿದೆ. ಈ ಸಮಸ್ಯೆಯ ನಿವಾರಣೆಗೆ ನಾವು ವಿಶೇಷ ವಾಟರ್ ಆಡಿಟ್ ಸಮಿತಿ ರಚಿಸಿ ಪರಿಹಾರಕ್ಕೆ ಮುಂದಾಗಿದ್ದು, ಈ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ ಸಚಿವರು ಸಂವಿಧಾನದ ಪರವಾಗಿರುವ ಸರ್ಕಾರ ನಮ್ಮದಾಗಿದೆ, ಬಾಬಾಸಾಹೇಬ್ ಅಂಬೇಡ್ಕರ್, ಬುದ್ಧ, ಗುರು ಬಸವಣ್ಣ, ನಾರಾಯಣಗುರುಗಳ ತತ್ವಗಳನ್ನು ಉಳಿಸಿ ಬೆಳೆಸುವ, ನಿಮ್ಮದೇ ಸರ್ಕಾರ ಇದಾಗಿದೆ, ಉತ್ತಮ ಜನಪರ ವ್ಯವಸ್ಥೆ ನಿರ್ಮಾಣಕ್ಕೆ ನಿಮ್ಮೆಲ್ಲರ ಸಹಕಾರ ಬೇಕೆಂದು ಅವರು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)










Discussion about this post