ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಶಿಕ್ಷಣ ತಜ್ಞ, ಪ್ರತಿಷ್ಠಿತ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ವಿಜಯ್ ಹೆಗ್ಡೆ(83) ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ವಿನಯ್ ಅವರ ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಇಲ್ಲಿನ ಶಿವಭಾಗ್’ನಲ್ಲಿರುವ ಅವರ ನಿವಾಸದಲ್ಲಿ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ದೇರಳಕಟ್ಟೆಯ ನಿಟ್ಟೆ ಕ್ಯಾಂಪಸ್’ನಲ್ಲಿ ಸಂಜೆ 4.30ರಿಂದ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ ಅವರ ಎರಡನೇ ಪುತ್ರ ವಿನಯ್ ಹೆಗ್ಡೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ದೊಡ್ಡದು.
ವಿನಯ್ ಹೆಗ್ಡೆ ಅವರು ಸ್ಥಾಪಿಸಿರುವ ನಿಟ್ಟೆ ಶಿಕ್ಷಣ ಸಂಸ್ಥೆಯಲ್ಲಿ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಇನ್ನಿತರ ಕೋರ್ಸ್’ಗಳು ಇವೆ. ಇತ್ತೀಚೆಗೆ ನಿಟ್ಟೆ ಶಿಕ್ಷಣ ಸಂಸ್ಥೆಗೆ ಪರಿಗಣಿತ ವಿವಿ ಮಾನ್ಯತೆ ದೊರೆತಿದೆ.
ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದವರು. ತಮ್ಮ ತಂದೆಯವರ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.
ವಿನಯ್ ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, info@kalpa.news


















