No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2026
in ದಕ್ಷಿಣ ಕನ್ನಡ
0
ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಕಡಬ ತಾಲೂಕು ಕೊಯಿಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಕಾಲೇಜಿನಲ್ಲಿ #Veterinary college ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಶ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.

ಅವರು ಮಂಗಳವಾರ ಕೊಯಿಲ ಪಶುವೈದ್ಯಕೀಯ ಕಾಲೇಜು ಹಾಗೂ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಕೊಯಿಲ ಪಶುವೈದ್ಯಕೀಯ ಕಾಲೇಜು ಕಟ್ಟಡಕ್ಕೆ 2016ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಪ್ರಸ್ತುತ ಕಾಮಗಾರಿ ಪೂರ್ಣಗೊಂಡಿದೆ. ಕಾಲೇಜಿಗೆ ಅಗತ್ಯವಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಮಂಜೂರುಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ವರ್ಷದ ತರಗತಿಗಳನ್ನು ಪ್ರಾರಂಭಿಸಲು ಗಂಭೀರವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಕಾಲೇಜು, ಹಾಸ್ಟೆಲ್ ಕಟ್ಟಡ, ಪ್ರಯೋಗಾಲಯ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳು ಈಗಾಗಲೇ ಪೂರ್ಣಗೊಂಡಿದೆ. 13 ಉಪನ್ಯಾಸಕರ ಹುದ್ದೆ, 32 ಇತರೆ ಸಿಬ್ಬಂದಿ ಹುದ್ದೆಗಳು ಮಂಜೂರುಗೊಳಿಸಲಾಗಿದೆ. ಕಾಲೇಜಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ (ವಿ.ಸಿ.ಐ) ಅನುಮತಿ ದೊರಕುವುದು ಬಾಕಿ ಇದ್ದು, ಶೀಘ್ರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಜಾನುವಾರು ಸಂವರ್ಧನಾ ತರಬೇತಿ ಕೇಂದ್ರದಲ್ಲಿ ಅಪರೂಪದ ಜಾನುವಾರು ತಳಿಗಳನ್ನು ಬೆಳೆಸಲು ಹೆಚ್ಚು ಆದ್ಯತೆ ನೀಡಬೇಕು. ಜಾನುವಾರು ಮತ್ತು ಕುಕ್ಕುಟಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಹೆಚ್ಚಿಸಬೇಕು. ಹೊಸ ಹೊಸ ತಳಿಗಳನ್ನು ಪರಿಚಯಿಸಬೇಕು ಎಂದು ಸಚಿವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಕಾಣಿಕೆ ಸಂಖ್ಯೆಯು ಕುಸಿಯುತ್ತಿರುವುದರಿಂದ ಹೈನುಗಾರಿಕೆಯನ್ನು ಪೆÇ್ರೀತ್ಸಾಹಿಸಲು ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧೆಡೆ ಮಂಜೂರುಗೊಂಡಿರುವ ಪಶುವೈದ್ಯಕೀಯ ಆಸ್ಪತ್ರೆಗಳಿಗೆ ಜಮೀನು ಲಭ್ಯವಿಲ್ಲದಿದ್ದಲ್ಲಿ ಅದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸಚಿವರು ತಿಳಿಸಿದರು.

ಜಾನುವಾರು ವಿಮೆಗಳ ಕ್ಲೈಮ್ ಸಂದರ್ಭದಲ್ಲಿ ವಿಮಾ ಕಂಪನಿಗಳು ರೈತರಿಗೆ ಸ್ಪಂದಿಸುವುದಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ, ಕೇಂದ್ರ ಕಚೇರಿಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದರು.

ಪುತ್ತೂರಿಗೆ ಪಶುಸಂಗೋಪನೆ ಪಾಲಿ ಕ್ಲಿನಿಕ್ ಮಂಜೂರಾಗಿದ್ದು, ಶೀಘ್ರದಲ್ಲಿಯೇ ವಿವಿಧ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವಂತೆ ಸಚಿವ ವೆಂಕಟೇಶ್ ತಿಳಿಸಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಸುಳ್ಯ ತಾಲೂಕು ಗೋಶಾಲೆ ನಿರ್ಮಾಣಕ್ಕೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಇತರ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಎಂದರು. ಕೊೈಲ ಜಾನುವಾರು ಕೇಂದ್ರದಲ್ಲಿ ದೊರಕುವ ಹಾಲು ಸ್ಥಳೀಯರಿಗೆ ದೊರಕುವಂತಾಗಬೇಕು. ಪಶು ವೈದ್ಯಕೀಯ ಕಾಲೇಜಿನ ತರಗತಿಯನ್ನು ಆದಷ್ಟು ಶೀಘ್ರವೇ ಆರಂಭಿಸುವಂತೆ ಸಚಿವರಲ್ಲಿ ಆಗ್ರಹಿಸಿದರು.

ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರವು 1951 ರಲ್ಲಿ ಸ್ಥಾಪನೆಯಾಗಿದೆ. ಇಲ್ಲಿನ 247 ಎಕರೆ ಜಮೀನನ್ನು ಪಶುವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಹಾಗೂ 98 ಎಕರೆ ಜಮೀನನ್ನು ಜಿಲ್ಲಾ ಗೋಶಾಲೆ ನಿರ್ಮಾಣಕ್ಕೆ ನೀಡಲಾಗಿದೆ. ಜಿಲ್ಲಾ ಗೋಶಾಲೆಗೆ ರಾಜ್ಯ ಸರಕಾರದಿಂದ ಈವರೆಗೆ ರೂ.1.91 ಕೋಟಿ ಅನುದಾನ ಬಂದಿದೆ. ಪ್ರಸ್ತುತ ಈ ಗೋಶಾಲೆಯಲ್ಲಿ 154 ಜಾನುವಾರುಗಳು ಇವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿನೋತ್ ಪ್ರಿಯಾ, ಪಶು ಸಂಗೋಪನೆ ಇಲಾಖೆ ಆಯುಕ್ತೆ ಶಿಲ್ಪಾ ನಾಗ್, ಬೀದರ್ ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಕೆ.ಸಿ ವೀರಣ್ಣ, ಡಾ.ಸುಶಾಂತ್ ರೈ, ಮತ್ತಿತರರು ಉಪಸ್ಥಿತರಿದ್ದರು.

ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಸಭೆಗೆ ಇಲಾಖಾ ಮಾಹಿತಿ ನೀಡಿದರು. ಜಾನುವಾರ ತಳಿ ಸಂವರ್ಧನ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕ ಡಾ.ಚಿದಾನಂದ ಸ್ವಾಗತಿಸಿದರು.

ಇದಕ್ಕೂ ಮೊದಲು ಸಚಿವರು ಪಶು ವೈದ್ಯಕೀಯ ಕಾಲೇಜು ಕಟ್ಟಡ, ಜಿಲ್ಲಾ ಗೋಶಾಲೆ, ಹಾಗೂ ಜಾನುವಾರು ಸಂವರ್ಧನ ತರಬೇತಿ ಕೇಂದ್ರದ ವಿವಿಧ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMangaloreNews in KannadaNews KannadaVeterinary collegeಮಂಗಳೂರು
Share198Tweet124Send
Previous Post

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

Next Post

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

March 27, 2026
ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

March 27, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

March 27, 2026
ಯುದ್ಧ ತಪ್ಪಿಸಿ ಶಾಂತಿ ಮಾರ್ಗ ಅನುಸರಿಸೋಣ

ಯುದ್ಧ ತಪ್ಪಿಸಿ ಶಾಂತಿ ಮಾರ್ಗ ಅನುಸರಿಸೋಣ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL