No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಿ: ದಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ

kalpa News by kalpa News
June 22, 2021
in ದಕ್ಷಿಣ ಕನ್ನಡ
0
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಿ: ದಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮಂಗಳೂರು: ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ, ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗಳಿಗೆ ಜಿಲ್ಲಾಧಿಕಾರಿ ಕೆ. ವಿ. ಡಾ. ರಾಜೇಂದ್ರ ಸೂಚನೆ ನೀಡಿದರು.

ಅವರು ಇಂದು ತಮ್ಮ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಮಲೇರಿಯಾ/ಡೆಂಗ್ಯೂ ನಿಯಂತ್ರಣದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು ಮಳೆ ನೀರು ಎಲ್ಲೆಂದರಲ್ಲಿ ನಿಂತು ಅದರಲ್ಲಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಸೇರಿದಂತೆ ಮತ್ತಿತರ ರೋಗಗಳು ಹರಡುವ ಸಂಭವವಿದೆ. ಸಾರ್ವಜನಿಕರಲ್ಲಿ ಸೊಳ್ಳೆಗಳ ನಿಯಂತ್ರಣ ಹಾಗೂ ಆರೋಗ್ಯ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಅನಾಫಿಲೀಸ್, ಈಡಿಸ್ ಮತ್ತು ಕೊಲೆಕ್ಸ್ ಎಂಬ ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ, ಆನೆಕಾಲು ರೋಗ ಹಾಗೂ ಮೆದುಳು ಜ್ವರದಂತ ರೋಗಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸಾರ್ವಜನಿಕರು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಒಟ್ಟು 277 ಪ್ರಕರಣಗಳು ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ 22 ಮಲೇರಿಯಾ ಪ್ರಕರಣಗಳು ದಾಖಲಾಗಿದೆ ಹಾಗೆಯೆ ಒಟ್ಟು 104 ಡೆಂಗ್ಯೂ ಪ್ರಕರಣಗಳು ಕಂಡುಬಂದಿದೆ ಎಂದರು.
ಜನರಲ್ಲಿ ಜ್ವರದ ಪ್ರಕರಣಗಳು ಕಂಡುಬಂದಲ್ಲಿ ಕಡ್ಡಾಯವಾಗಿ ಮಲೇರಿಯಾ ರಕ್ತ ಪರೀಕ್ಷೆ ಮಾಡುವುದು ಸೂಕ್ತ ಎಂದ ಅವರು, ಮಂಗಳೂರು ನಗರದ ಬಂದರು, ಬೆಂಗ್ರೆ, ಜೆಪ್ಪು, ಲೇಡಿಹಿಲ್, ಪಡೀಲ್, ಎಕ್ಕೂರು, ಶಕ್ತಿನಗರ, ಕುಲಾಲ್, ಕುಳಾಯಿ ಹಾಗೂ ಸುರತ್ಕಲ್ ಪ್ರದೇಶಗಳಲ್ಲಿ ಹೆಚ್ಚು ಮಲೇರಿಯಾ/ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿವೆ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದರು.

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಲಕಾಲಕ್ಕೆ ಘನತ್ಯಾಜ್ಯ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಬಾರದು ಎಂದ ಅವರು, ಮೀನುಗಾರಿಕಾ ದೋಣಿಗಳಲ್ಲಿ ನೀರು ಸಂಗ್ರಹ ಟ್ಯಾಂಕ್, ಬ್ಯಾರಲ್‍ಗಳನ್ನು ಮುಚ್ಚಳದಿಂದ ಮುಚ್ಚಬೇಕು. ಸಣ್ಣ ದೋಣಿಗಳಲ್ಲಿಯೂ ಮತ್ತು ಪ್ಲಾಸ್ಟಿಕ್ ಕ್ರೇಟ್‍ಗಳಲ್ಲಿ, ಟೈರ್ ಮತ್ತು ವಾಣಿಜ್ಯ ಸಂಕೀರ್ಣಗಳ ಮೇಲ್ಚಾವಣಿಯಲ್ಲಿ, ಅಂಗಡಿಗಳಲ್ಲಿ ಸಂಗ್ರಹವಾಗುವ ಎಳನೀರು ಚಿಪ್ಪುಗಳಲ್ಲಿ ಹಾಗೂ ತಂಪು ಪಾನೀಯದ ಖಾಲಿ ಬಾಟಲ್‍ಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದರು.

ಪಂಚಾಯತ್ ವ್ಯಾಪ್ತಿಯಲ್ಲಿ ಟಾಸ್ಕ್‍ಪೋರ್ಸ್ ಸಭೆಯನ್ನು ನಡೆಸಿ ಮಲೇರಿಯಾ/ಡೆಂಗ್ಯೂ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಸ್ವಚ್ಛತೆಯಿಲ್ಲದಿರುವ ಜನವಸತಿ ಪ್ರದೇಶಗಳನ್ನು ಗುರುತಿಸಿ ಮನೆಯ ಸುತ್ತಮುತ್ತಲಿನ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮನೆಯ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ಧ್ವನಿವರ್ಧಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಕಟ್ಟಡಗಳು ಹಾಗೂ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಶಾಲಾ-ಕಾಲೇಜು ಆರಂಭಕ್ಕೆ ಮುನ್ನ ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾಹಿತಿ ನೀಡಬೇಕು ಹಾಗೂ ಮಲೇರಿಯಾ/ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಪ್ರತಿಯೊಂದು ಅಂಗನವಾಡಿ ಕಟ್ಟಡಗಳು ಮತ್ತು ವಸತಿ ನಿಲಯಗಳಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಕಾಲಕಾಲಕ್ಕೆ ರಾಸಾಯನಿಕ ಸಿಂಪಡಣೆಯನ್ನು ಮಾಡಬೇಕು ಹಾಗೂ ಜ್ವರದ ಪ್ರಕರಣಗಳ ಮಾಹಿತಿಯನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆರೋಗ್ಯ ಇಲಾಖೆಗೆ ನೀಡಬೇಕು ಎಂದರು.

ರಸ್ತೆ ಕಾಮಗಾರಿ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ತೆರೆದ ಟ್ಯಾಂಕ್‍ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತವೆ ಆದ್ದರಿಂದ ಸರಿಯಾದ ಮುಚ್ಚಳವನ್ನು ಅಳವಡಿಸುವಂತೆ ಆಯಾ ಸಿಬ್ಬಂದಿ ನೋಡಿಕೊಳ್ಳಬೇಕು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದುಹೋಗುವ ವ್ಯವಸ್ಥೆಯಾಗಬೇಕು ಎಂದರು.

ಹೂವಿನ ಕುಂಡಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಗಮನಹರಿಸಬೇಕು ಹಾಗೂ ತೊಟಗಳಿಗೆ ಹೋಗುವಾಗ ಮೈತುಂಬಾ ಬಟ್ಟೆ ಧರಿಸುವುದು, ಬೇವಿನ ಎಣ್ಣೆ ಹಚ್ಚಿಕೊಳ್ಳುಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಡಾ.ನವೀನ್ ಚಂದ್ರ ಕುಲಾಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್’ನಿಂದ ಮಾದರಿ ಕಾರ್ಯ: ಎಚ್’ಐವಿ ಸೋಂಕಿತರಿಗೆ ಫುಡ್’ಕಿಟ್ ವಿತರಣೆ

Next Post

ಬೆಂಗಳೂರಿನ ಬಸವನಗುಡಿ ಪ್ರಧಾನ ಅಂಚೆ ಕಚೇರಿಯಲ್ಲಿ ಯೋಗ ದಿನ: ಅಂಚೆಚೀಟಿ, ಪೋಸ್ಟ್ ಕಾರ್ಡ್ ಮೇಲೆ ಯೋಗ ಮುದ್ರಿಕೆ

kalpa News

kalpa News

Next Post
ಬೆಂಗಳೂರಿನ ಬಸವನಗುಡಿ ಪ್ರಧಾನ ಅಂಚೆ ಕಚೇರಿಯಲ್ಲಿ ಯೋಗ ದಿನ: ಅಂಚೆಚೀಟಿ, ಪೋಸ್ಟ್ ಕಾರ್ಡ್ ಮೇಲೆ ಯೋಗ ಮುದ್ರಿಕೆ

ಬೆಂಗಳೂರಿನ ಬಸವನಗುಡಿ ಪ್ರಧಾನ ಅಂಚೆ ಕಚೇರಿಯಲ್ಲಿ ಯೋಗ ದಿನ: ಅಂಚೆಚೀಟಿ, ಪೋಸ್ಟ್ ಕಾರ್ಡ್ ಮೇಲೆ ಯೋಗ ಮುದ್ರಿಕೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL