ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಪ್ರತೇಕ ರಾಷ್ಟ್ರ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ ಗೆ DK Suresh ಈಗ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ವಕೀಲರೊಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ.
ಮಂಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಬಿಜೆಪಿ ಮುಖಂಡ ಹಾಗೂ ವಕೀಲ ಪಿ.ವಿಕಾಸ್ ಎಂಬುವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಡಿ.ಕೆ. ಸುರೇಶ್ ಅವರ ಹೇಳಿಕೆ ದೇಶದ್ರೋಹದ, ಕುಮ್ಮಕ್ಕಿಗೆ ಕಾರಣವಾಗುವಂತ ಹೇಳಿಕೆಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋ ನಿಟ್ಟಿನಲ್ಲಿ ಕ್ರಮವಾಗಬೇಕಿದೆ. ಆ ನಿಟ್ಟಿನಲ್ಲಿ ಘನ ನ್ಯಾಯಾಲಯವು ಸೂಚಿಸಬೇಕು ಎಂಬುದಾಗಿ ಅರ್ಜಿಯಲ್ಲಿ ಕೋರಿದ್ದಾರೆ.
ಇಷ್ಟೇ ಅಲ್ಲದೇ ಐಪಿಸಿ ಸೆಕ್ಷನ್ 124ಎ ಅಡಿಯಲ್ಲಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳೋದಕ್ಕೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅಲ್ಲದೇ ಪೊಲೀಸ್ ಆಯುಕ್ತ, ಮಂಗಳೂರು ಉತ್ತರ ಪೊಲೀಸ್ ಠಾಣೆಗೂ ದೂರು ದಾಖಲಿಸಿಕೊಳ್ಳೋದಕ್ಕೆ ಸೂಚಿಸುವಂತೆ ಮನವಿ ಮಾಡಲಾಗಿದೆ.
Also read: ಫೆ.4ರಂದು ಮಾತೃ ವಾತ್ಸಲ್ಯ- ಮದರ್ ಮತ್ತು ಬೇಬಿ ಕೇರ್ ಆಸ್ಪತ್ರೆ ಲೋಕಾರ್ಪಣೆ
ಈ ಹಿನ್ನಲೆಯಲ್ಲಿ ಉತ್ತರ ಭಾರತಕ್ಕೆ ಹಣ ಖರ್ಚು ಮಾಡೋದನ್ನು ಖಂಡಿಸಿ, ದಕ್ಷಿಣ ಭಾರತದ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದಂತ ಸಂಸದ ಡಿ.ಕೆ ಸುರೇಶ್ ಗೆ ಸಂಕಷ್ಟ ಎದುರಾದಂತೆ ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















